ಬೆಂಗಳೂರು: ಅಕ್ರಮವಾಗಿ ನಡೆಯುತ್ತಿದ್ದ ನ್ಯೂ ಇಯರ್ ಪಾರ್ಟಿಯನ್ನು ಪೊಲೀಸರು ರದ್ದುಗೊಳಿಸಿದ್ದಾರೆ. ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ನ್ಯೂ ಇಯರ್ ಪಾರ್ಟಿಯ ಮೇಲೆ ದಾಳಿ ನಡೆಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಹಳ್ಳಿಯ ಬಳಿ ನಿಯಮ ಉಲ್ಲಂಘಿಸಿ ನಡೆಸಲಾಗುತ್ತಿತ್ತು. ಹೆಗ್ಗಡಹಳ್ಳಿ ಸಮೀಪ ಗಾರ್ಡನ್ ಏರಿಯಾದ ಖಾಸಗಿ ಫಾರ್ಮ್ ಹೌಸ್ ನಲ್ಲಿ ಅನುಮತಿ ಪಡೆದುಕೊಳ್ಳದೆ ನಡೆಯುತ್ತಿದ್ದ ಪಾರ್ಟಿ ರದ್ದು ಮಾಡಲಾಗಿದೆ. 40-50 ಯುವಕರು ಸೇರಿಕೊಂಡು ಭರ್ಜರಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು.
ಡಿಜೆ ಸೌಂಡ್ ಗೆ ಕುಣಿದು ಕುಪ್ಪಳಿಸುತ್ತಿದ್ದರು. ಈ ವೇಳೆ ದಾಳಿ ನಡೆಸಲಾಗಿದೆ. ಪಾರ್ಟಿ ರದ್ದು ಮಾಡಿ ಮ್ಯೂಸಿಕ್ ಬಾಕ್ಸ್, ಮದ್ಯದ ಬಾಟಲಿ ವಶಕ್ಕೆ ಪಡೆಯಲಾಗಿದೆ. ಮಾಲೀಕರ ವಿರುದ್ಧ ಕೇಸ್ ದಾಖಲಿಸಲಾಗುವುದು ಎನ್ನಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

