HomeKarnatakaBREAKING: ಮೊಹರಂ ಆಚರಣೆ ವೇಳೆ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಪುಂಡರಿಂದ ಹಲ್ಲೆ

BREAKING: ಮೊಹರಂ ಆಚರಣೆ ವೇಳೆ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಪುಂಡರಿಂದ ಹಲ್ಲೆ

ಚಿಕ್ಕಬಳ್ಳಾಪುರ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿಯಲ್ಲಿ ಮೊಹರಂ ವೇಳೆಯಲ್ಲಿ ಘಟನೆ ನಡೆದಿದೆ.

ಕಾನ್ಸ್ಟೇಬಲ್ ಮಹೇಂದ್ರಪ್ಪ ಅವರನ್ನು ಎಳೆದಾಡಿ ಪುಂಡರು ಹಲ್ಲೆ ಮಾಡಿದ್ದಾರೆ. ಕಾನ್ಸ್ಟೇಬಲ್ ಮಹೇಂದ್ರ, ಹೋಂಗಾರ್ಡ್ ಪ್ರಸಾದ್ ಅವರ ಮೇಲೆ ಶ್ರೀನಿವಾಸ್ ಮತ್ತು ಕಾರ್ತಿಕ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗ್ರಾಮದಲ್ಲಿ ಮೊಹರಂ ಆಚರಣೆಯ ವೇಳೆ ಗಲಾಟೆ ನಡೆಯುತ್ತಿತ್ತು. ಗಲಾಟೆ ತಡೆದು ವಿಡಿಯೋ ಮಾಡಿಕೊಂಡಿದ್ದಕ್ಕೆ ಮೊಬೈಲ್ ಕಸಿದು ಹಲ್ಲೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಡಿಬಂಡೆ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಮಹೇಂದ್ರ, ಹೋಂ ಗಾರ್ಡ್ ಪ್ರಸಾದ್ ಮೇಲೆ ಹಲ್ಲೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ ಶ್ರೀನಿವಾಸ್, ಕಾರ್ತಿಕ್ ಸೇರಿದಂತೆ ಹಲವರ ವಿರುದ್ಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular