BREAKING : ಜನತಾ ದರ್ಶನದಲ್ಲಿ ಬಡರೈತನಿಗೆ ಭೂಒಡೆತನದ ಹಕ್ಕು : ಸಿಎಂ ಸಿದ್ದರಾಮಯ್ಯ ಪರಿಹಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಡರೈತನ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕರ್ಕಿಪೇಟೆಯ ದಿನೇಶ್‌ ಎಂಬವವರು 40 ವರ್ಷಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡಿಕೊಂಡು ಬಂದಿದ್ದು, ಸೆಕ್ಷನ್‌ 50, 53 ಹಾಗೂ 57 ರಡಿ ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಕುರಿತು ಯಾವುದೇ ರೀತಿಯ ಕ್ರಮ ಆಗಿಲ್ಲ. ಆದ್ದರಿಂದ ಅವರು ಇಂದು ನಡೆದ ಜನತಾ ದರ್ಶನದಲ್ಲಿ ಸಾಗುವಳಿ ಚೀಟಿ ಒದಗಿಸುವಂತೆ ಮರು ಮನವಿಯನ್ನು ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಪರಿಶೀಲಿಸಿ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಸೂಚಿಸಿ, ದಾಖಲೆರಹಿತ ಬಡರೈತನ ಸಂಕಷ್ಟ ನಿವಾರಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read