HomeKarnatakaBREAKING : ಜೈನಮುನಿ ಮೃತದೇಹದ ಮರಣೋತ್ತರ ಪರೀಕ್ಷೆ ಆರಂಭ : ಮಧ್ಯಾಹ್ನ 12.30 ಕ್ಕೆ ಅಂತ್ಯಕ್ರಿಯೆ

BREAKING : ಜೈನಮುನಿ ಮೃತದೇಹದ ಮರಣೋತ್ತರ ಪರೀಕ್ಷೆ ಆರಂಭ : ಮಧ್ಯಾಹ್ನ 12.30 ಕ್ಕೆ ಅಂತ್ಯಕ್ರಿಯೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದ್ದು, ಮೃತದೇಹವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ.

ಇಂದು ಬೆಳಗ್ಗೆ 10.30 ಗಂಟೆಗೆ ಜೈನಮುನಿ ಮೃತದೇಹದ ಮರಣೋತ್ತರ ಪರೀಕ್ಷೆ ಆರಂಭವಾಗಿದ್ದು, ನಂತರ ಮಧ್ಯಾಹ್ನ 12.30 ಕ್ಕೆ ಹಿರೇಕೋಡಿಗೆ ಗ್ರಾಮದ ನಂದಿಪರ್ವತ ಆಶ್ರಮದ ಆವರಣದಲ್ಲಿ ಜೈನ ಸಂಪ್ರದಾಯದಂತೆ ಜೈನಮುನಿ ಸ್ವಾಮೀಜಿಗಳ ಅಂತ್ಯ ಸಂಸ್ಕಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈನ ಮುನಿ ಹತ್ಯೆ ಪ್ರಕರಣ ಸಂಬಂಧ ರಾಯಬಾಗ ತಾಲೂಕಿನ ಕಾಟಕಬಾವಿ ಗ್ರಾಮದ ನಾರಾಯಣ ಮಾಳಿ, ಹಸನ್ ಡಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿ 4 ಗಂಟೆಗೊಳಗಾಗಿ ಇಬ್ಬರುಉ ಆರಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular