ಕೊಪ್ಪಳ: ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಾದರೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುತ್ತಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾತನಾಡಿದ ಅವರು, ಅಧಿವೇಶನ ಮುಗಿದಿದೆ, ಯಾವುದೇ ಕ್ಷಣದಲ್ಲಾದರೂ ಅಧಿಕಾರ ಹಸ್ತಾಂತರಿಸಲಿದ್ದಾರೆ. ಮುಖ್ಯಮಂತ್ರಿ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂದು ಡಿಕೆ ಪರೋಕ್ಷವಾಗಿ ಹೇಳುತ್ತಿದ್ದಾರೆ. ಹೀಗಾಗಿ ಅಧಿಕಾರ ಹಂಚಿಕೆಗೆ ಸಮಯ ಸನ್ನಿಹಿತವಾಗಿದೆ. ಪ್ರಮಾಣವಚನ ಸ್ವೀಕರಿಸಲು ಡಿಕೆ ದೇವಾಲಯಕ್ಕೆ ಹೋಗುತ್ತಿದ್ದಾರೆ ಅನಿಸುತ್ತದೆ ಎಂದು ಹೇಳಿದ್ದಾರೆ.
ಡಿಕೆ ತುಂಬಾ ಹಠವಾದಿ, ಹೈಕಮಾಂಡ್ ಅಧಿಕಾರ ಹಂಚಿಕೆಯ ತೀರ್ಮಾನ ಮಾಡಿದೆ. ಡಿನ್ನರ್ ಮೀಟಿಂಗ್ ನಿಂದ ಏನೂ ಆಗುವುದಿಲ್ಲ. ವಾತಾವರಣ ನೋಡಿದರೆ ಖಂಡಿತ ಅಧಿಕಾರ ಹಸ್ತಾಂತರವಾಗುತ್ತದೆ ಅನಿಸುತ್ತದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಕೆ.ಎನ್. ರಾಜಣ್ಣ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಸಚಿವ ಸ್ಥಾನ ಕೊಡಬಹುದು ಎನ್ನುವ ಕಾರಣಕ್ಕೆ ಭೇಟಿಯಾಗಿರಬಹುದು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

