HomeKarnatakaBREAKING : ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಂಸದ 'ಪ್ರಜ್ವಲ್ ರೇವಣ್ಣ' |Prajwal...

BREAKING : ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ |Prajwal Revanna

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಅತ್ಯಾಚಾರ ಪ್ರಕರಣ ಸೇರಿ 3 ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮೊದಲು ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಇದೀಗ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿತ್ತು . ಮೊದಲನೇ ಪ್ರಕರಣದಲ್ಲಿ ಜಾಮೀನು ಕೋರಿದ್ದ ಪ್ರಜ್ವಲ್ ಅರ್ಜಿ ವಜಾಗೊಂಡಿದ್ದು, ವಿಶೇಷ ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ, ಲೈಂಗಿಕ ದೌರ್ಜನ್ಯ ಸೇರಿದಂತೆ ಮೂರು ಗಂಭೀರ ಪ್ರಕರಣಗಳು ದಾಖಲಾಗಿದ್ದು. ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಂಗ ಬಂಧನದಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಎಸ್ ಐ ಟಿ ಅಧಿಕಾರಿಗಳು ಅವರನ್ನು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular