HomeKarnatakaBREAKING : ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಪ್ರಜ್ವಲ್ ರೇವಣ್ಣ, ಅಲರ್ಟ್ ಆದ...

BREAKING : ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಪ್ರಜ್ವಲ್ ರೇವಣ್ಣ, ಅಲರ್ಟ್ ಆದ ‘SIT’..!

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಬರೋದು ಫಿಕ್ಸ್ ಆಗಿದ್ದು, ಎಸ್ ಐ ಟಿ ಅಧಿಕಾರಿಗಳ ಬಳಿ ತಗ್ಲಾಕೊಳ್ಳಲಿದ್ದಾರೆ.ಪ್ರಜ್ವಲ್ ವಿಮಾನ ಹತ್ತುತ್ತಿದ್ದಂತೆ  ಎಸ್ ಐ ಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. 

ಹೌದು. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಬಂದಿಳಿದ್ದಾರೆ. 2 ಟ್ರಾಲಿ ಬ್ಯಾಗ್ ಸಮೇತ ಅವರು ಮ್ಯೂನಿಕ್ ಏರ್ ಪೋರ್ಟ್ ಗೆ ಬಂದಿಳಿದ್ದು,ಲಗೇಜ್ ಚೆಕ್ ಇನ್ ಮಾಡಿರುವ ಮಾಹಿತಿ ಕೂಡ ಲಭ್ಯವಾಗಿದೆ. ಲುಫ್ತಾನ್ಸ್ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಬರುವುದು ಕನ್ಫರ್ಮ್ ಆಗಿದೆ.

ಇದರ ನಡುವೆ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ವಿಚಾರಣೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿದ್ದರು.ಪ್ರಜ್ವಲ್ ದೇಶಕ್ಕೆ ಆಗಮಿಸುತ್ತಿದ್ದಂತೆ ಬಂಧಿಸುವ ನಿಟ್ಟಿನಲ್ಲಿ ಎಸ್ಐಟಿ ಸಿದ್ಧತೆ ನಡೆಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular