ಬೆಂಗಳೂರು : ವಿಧಾನಸೌಧದಲ್ಲಿ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ವ್ಹೀಲ್’ಚೇರ್ ನಲ್ಲೇ ಸಭೆಗೆ ಆಗಮಿಸಿದ್ದಾರೆ.
ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.
ಮಾ. 3 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾ.7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ .2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.ಸಿದ್ದರಾಮಯ್ಯ ಅವರ ವಿವಿಧ ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಮಂಡಿ ನೋವಿಂದ ಬಳಲುತ್ತಿರುವ ಸಿಎಂ ಕೆಲವು ದಿನಗಳಿಂದ ವ್ಹೀಲ್ ಚೇರ್ ಗೆ ಅವಲಂಬಿತರಾಗಿದ್ದಾರೆ.