HomeLatest NewsBREAKING: ತುಂಬು ಗರ್ಭಿಣಿಗೆ ಕಲಬುರಗಿಯಲ್ಲೇ ಕೆಎಎಸ್ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಹತ್ವದ ಆದೇಶ

BREAKING: ತುಂಬು ಗರ್ಭಿಣಿಗೆ ಕಲಬುರಗಿಯಲ್ಲೇ ಕೆಎಎಸ್ ಪರೀಕ್ಷೆ ಬರೆಯಲು ಅವಕಾಶ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಗ್ರೂಪ್ ಎ ಮತ್ತು ಬಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ತಂಬು ಗರ್ಭಿಣಿಗೆ ಕಲಬುರಗಿಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ನಿರ್ದೇಶನ ನೀಡಲಾಗಿದೆ.

ಮಹಾಲಕ್ಷ್ಮಿ ಎಂಬುವರು ಕಲಬುರಗಿಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ತುಂಬು ಗರ್ಭಿಣಿ ಆಗಿರುವುದರಿಂದ ಧಾರವಾಡ, ಬೆಂಗಳೂರಿಗೆ ಬರಲು ಆಗುವುದಿಲ್ಲ. ಕಲಬುರಗಿಯಲ್ಲಿಯೇ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದರು.

ಆದರೆ, ಒಬ್ಬ ಅಭ್ಯರ್ಥಿಗಾಗಿ ಈ ವ್ಯವಸ್ಥೆಯನ್ನು ಕಲ್ಪಿಸಲು ಕರ್ನಾಟಕ ಲೋಕಸೇವಾ ಆಯೋಗ ವಿರೋಧಿಸಿತ್ತು. ಚುನಾವಣೆ, ಉಪಚುನಾವಣೆಗೆಂದು ತೆರಿಗೆ ಹಣ ವ್ಯರ್ಥವಾಗುತ್ತದೆ. ದೂರ ದೃಷ್ಟಿಯ ಕೊರತೆಯಿಂದ ಕೋಟ್ಯಂತರ ತೆರಿಗೆ ಹಣ ಖರ್ಚಾಗುತ್ತದೆ. ಗರ್ಭಿಣಿ ಅಭ್ಯರ್ಥಿಗಾಗಿ ಕಲಬುರಗಿಯಲ್ಲೇ ಪರೀಕ್ಷೆಗೆ ವ್ಯವಸ್ಥೆ ಮಾಡಿ ಎಂದು ಹೈಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಮೂರ್ತಿ ಡಾ. ಚಿಲಕೂರು ಸುಮಲತಾ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular