ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಅರ್ಚಕ ಗುರುರಾಜ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಯೂಟ್ಯೂಬ್ ಚಾನಲ್ ವೊಂದಕ್ಕೆ ಅರ್ಚಕ ಗುರುರಾಜ್ ಹೇಳಿಕೆ ನೀಡಿದ್ದರು. ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು. ಸಹಾಯಕ ಅರ್ಚಕ ಗುರುರಾಜ್ ಅವರನ್ನು ಕೆಂಗೇರಿ ಠಾಣೆ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಅಶ್ಲೀಲ ಪದಬಳಕೆ ಮಾಡಿದ್ದ ಅರ್ಚಕ ಗುರುರಾಜ್, ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಹಿಡುಕ ಎಂದು ಹೇಳಿದ್ದರು. ಅರ್ಚಕ ಸ್ಥಾನದಿಂದ ಅವರನ್ನು ರಾಘವೇಂದ್ರ ಸೇವಾ ಸಮಿತಿ ಅಮಾನತು ಮಾಡಿದೆ.