ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ಅರ್ಚಕ ಗಂಭೀರವಾಗಿ ಗಾಯಗೊಂಡಿದ್ದಾರೆ
ಕೊಂಡ ಹಾಯುವಾಗ ಎಡವಿ ಬಿದ್ದ ಅರ್ಚಕ ಗುಡ್ಡಪ್ಪ ಶಿವರಾಮ ಗಾಯಗೊಂಡಿದ್ದು, ಬೆಳ್ಳೂರು ಸಮೀಪದ ಬಿಜಿಎಸ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಇಂದು ಜಾತ್ರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ದೊಡ್ಡಬಾಲ ಗ್ರಾಮದ ಹುಚ್ಚಪ್ಪ ದೇವರ ಜಾತ್ರಾ ಮಹೋತ್ಸವ ಹಬ್ಬದ ಹಿನ್ನೆಲೆ ದೇವಾಲಯದ ಮುಂದೆ ಕೊಂಡೋತ್ಸವ ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಆಗಮನಕ್ಕೆ ಮುನ್ನವೇ ಅವಘಡ ನಡೆದಿದೆ.
39 ವರ್ಷದ ನಂತರ ಜಾತ್ರೆ: ಸಿದ್ಧರಾಮಯ್ಯ ಭಾಗಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೀರದೇವರುಗಳ ದೊಡ್ಡ ಹಬ್ಬದಲ್ಲಿ ಅವರು ಭಾಗಿಯಾಗಲಿದ್ದಾರೆ. 39 ವರ್ಷಗಳ ನಂತರ 14 ಕೂಟದ ದೇವರುಗಳ ಹಬ್ಬ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ದೊಡ್ಡ ಬಾಲ ಗ್ರಾಮದಲ್ಲಿ ನಡೆಯುತ್ತಿರುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡ ಬಾಲ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಆಯೋಜಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹದ್ದಿಹಳ್ಳಿಗೆ ಬರಲಿದ್ದಾರೆ.