ನವದೆಹಲಿ: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿ. ಜೋಸೆಫ್ ವಿಜಯ್ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಅವರ ಅಧಿಕಾರಾವಧಿ ಅತ್ಯುತ್ತಮವಾಗಿರಲಿ ಎಂದು ಹಾರೈಸುತ್ತೇನೆ. ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದೊಂದಿಗೆ ಸಹಭಾಗಿತ್ವದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಮೋದಿ ತಿಳಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಅಧಿಕಾರಾವಧಿಗೆ ಶುಭಾಶಯಗಳು. ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ತಿಳಿಸಿದ್ದಾರೆ.

