BREAKING : ‘ಗಗನಯಾನ’ ಯೋಜನೆಗೆ ನಾಲ್ವರು ಯಾತ್ರಿಗಳ ಹೆಸರು ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್ ‘ಗಗನಯಾನ’ಕ್ಕೆ ನಾಲ್ವರು ಪೈಲಟ್ ಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ್ದಾರೆ.

ಕೇರಳದ ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ) ಗ್ರೂಪ್ ಕ್ಯಾಪ್ಟನ್ ಪಿ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್ ಶುಕ್ಲಾ ಅವರು ಪೈಲಟ್ ಗಳಾಗಿದ್ದಾರೆ.

ಕೇರಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್ಎಸ್ಸಿ) ಭೇಟಿ ನೀಡಿದರು, ಅಲ್ಲಿ ಅವರು ಗಗನಯಾನ ಮಿಷನ್ನ ಪ್ರಗತಿಯನ್ನು ಪರಿಶೀಲಿಸಿದರು . “ಪ್ರಧಾನಿ ಮೋದಿ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡುತ್ತಿರುವುದು ನಮಗೆಲ್ಲರಿಗೂ ಬಹಳ ಸಂತೋಷದ ಸಂದರ್ಭವಾಗಿದೆ” ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು.

ಗಗನಯಾನ ಮಿಷನ್

ಗಗನಯಾನ ಮಿಷನ್ ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಕಾರ್ಯಾಚರಣೆಯಾಗಿದ್ದು, 2024-2025 ರ ನಡುವೆ ಉಡಾವಣೆಯ ಗುರಿಯನ್ನು ಹೊಂದಿದೆ. ಇಸ್ರೋ ಮುಂದಿನ ಗುರಿಗಳಲ್ಲಿ ಮೊದಲನೆಯದು ಗಗನಯಾನ ಯೋಜನೆ. ಮನುಷ್ಯರನ್ನು ಬಾಹ್ಯಾಕಾಶಕ್ಕೆ ಕಳುಹಿಸುವುದು ಮತ್ತು ಸುರಕ್ಷಿತವಾಗಿ ಭೂಮಿಗೆ ಕರೆತರುವುದು ಇಸ್ರೋದ ಮೊದಲ ಆದ್ಯತೆ ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read