BREAKING : ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ‘BIETC’ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು,ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಮೂಡಿಬಂದಿರುವ ಬೋಯಿಂಗ್ನ ಹೊಸ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ಅನ್ನು ಪ್ರಧಾನಿ ಉದ್ಘಾಟಿಸಿದ್ದಾರೆ.

ಪ್ರಧಾನಿ ಮೋದಿ ಅವರ ಜೊತೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತಿತರರು ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಪ್ರಧಾನಿ ಮೋದಿ ಅವರನ್ನು ಸಂಜೆ 3.55ಕ್ಕೆ ಬೀಳ್ಕೊಡಲಾಗುತ್ತದೆ.ಏರ್ ಪೋರ್ಟ್ ನಲ್ಲಿ ಪ್ರಧಾನಿ ಮೋದಿಗೆ ಡಿಸಿಎಂ ಡಿಕೆಶಿ ಸ್ವಾಗತ ಕೋರಿದರೆ, ಕಾರ್ಯಕ್ರಮದ ವೇದಿಕೆ ಬಳಿ ಸಿಎಂ ಸಿದ್ದರಾಮಯ್ಯ ಸ್ವಾಗತ ಕೋರಿದರು.

43 ಎಕರೆ ವಿಶಾಲ ಪ್ರದೇಶದಲ್ಲಿ ಅಂತರಿಕ್ಷಯಾನ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಕ್ಯಾಂಪಸ್ ತಲೆ ಎತ್ತಿದೆ.  43 ಎಕರೆ ಪ್ರದೇಶದಲ್ಲಿ 1600 ಕೋಟಿ ರೂ ವೆಚ್ಚದಲ್ಲಿ ಈ ಕ್ಯಾಂಪಸ್ ನಿರ್ಮಿಸಲಾಗಿದೆ.

ದೇವನಹಳ್ಳಿ ತಾಲ್ಲೂಕಿನ ಭಟ್ರಮಾರನಹಳ್ಳಿಯಲ್ಲಿ 43 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಹೊಸ ಕ್ಯಾಂಪಸ್ ನಿರ್ಮಿಸಲಾಗಿದ್ದು, ಇದನ್ನು 1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾಗಿದೆ.ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವುದರಿಂದ ಏರೋಸ್ಪೇಸ್ ಏಜೆನ್ಸಿಯ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ.ಕಳೆದ ವರ್ಷ, ಬೋಯಿಂಗ್ ಭಾರತೀಯ ಪೈಲಟ್ಗಳಿಗೆ ತರಬೇತಿ ನೀಡಲು ಮೂಲಸೌಕರ್ಯ ಮತ್ತು ಕಾರ್ಯಕ್ರಮಗಳಲ್ಲಿ 100 ಮಿಲಿಯನ್ ಡಾಲರ್ ಹೂಡಿಕೆಯನ್ನು ಘೋಷಿಸಿತು.

https://twitter.com/ANI/status/1748272041982304564?ref_src=twsrc%5Etfw%7Ctwcamp%5Etweetembed%7Ctwterm%5E1748272041982304564%7Ctwgr%5Eb097ca3c66ba24760b8b6e178c207a8c1b0aa9a8%7Ctwcon%5Es1_&ref_url=https%3A%2F%2Fwww.news9live.com%2Fcity%2Fbengaluru%2Fpm-modi-inaugurates-boeing-india-campus-in-bengalurus-devanahalli-2411228

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read