HomeLatest NewsBREAKING: ಖುದ್ದು ವಿಮಾನ ನಿಲ್ದಾಣಕ್ಕೆ ಹೋಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರನ್ನು ಆತ್ಮೀಯವಾಗಿ ಸ್ವಾಗತಿಸಿದ...

BREAKING: ಖುದ್ದು ವಿಮಾನ ನಿಲ್ದಾಣಕ್ಕೆ ಹೋಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್ಪೋರ್ಟ್ ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಮಿಸಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಸ್ವಾಗತ ನೀಡಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಬಂದಿಳಿದ ವೇಳೆ ಮೋದಿ ಸ್ವಾಗತಿಸಿದ್ದಾರೆ.

ಅಧ್ಯಕ್ಷ ಪುಟಿನ್ ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಡಿಸೆಂಬರ್ 5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲ್ಕು ವರ್ಷಗಳಲ್ಲಿ ರಷ್ಯಾದ ನಾಯಕ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಂಬಂಧಗಳಲ್ಲಿ ಹೊಸ ಹಂತದ ಸುಧಾರಣೆ ತರಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular