ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.
ಸಮಾವೇಶದಲ್ಲಿ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇದೀಗ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.ವಿಶೇಷ ವಿಮಾನದ ಮೂಲಕ ಶಿವಮೊಗ್ಗ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿ ನಂತರ ರಸ್ತೆ ಮಾರ್ಗವಾಗಿ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ವಿಕಸಿತ ಭಾರತ ನಿರ್ಮಿಸುವುದೇ ನಮ್ಮ ಗುರಿ. ಜೂನ್ 4 ರಂದು ಎನ್ ಡಿ ಎ ಮೈತ್ರಿಕೂಟ 400 ರ ಗಡಿ ದಾಟಲಿದೆ. ಭ್ರಷ್ಟಾಚಾರಿಗಳ ವಿರುದ್ಧ ಹೋರಾಡಲು 400 ಕ್ಕೂ ಅಧಿಕ ಸ್ಥಾನ ಗೆಲ್ಲಬೇಕಿದೆ. ತಮ್ಮ ಸುಳ್ಳು ಮರೆಮಾಚಲು ಕಾಂಗ್ರೆಸ್ ಮೋದಿ, ಕೇಂದ್ರ ಸರ್ಕಾರದತ್ತ ಸುಳ್ಳು ಆರೋಪ ಮಾಡುತ್ತಿದೆ. ಬಡವರ ಕಲ್ಯಾಣ, ಶ್ರೇಯೋಭಿವೃದ್ದಿಗಾಗಿ ಬಿಜೆಪಿ ಸರ್ಕಾರ ಶ್ರಮಿಸುತ್ತಿದೆ, ಆದರೆ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುವುದನ್ನೇ ಮುಂದುವರೆಸಿದೆ ಎಂದು ಹೇಳಿದರು.