ಬೆಂಗಳೂರು : ಆಗಸ್ಟ್ 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶ ರದ್ದಾಗಿದೆ ಎಂದು ತಿಳಿದು ಬಂದಿದೆ. ಅಂದು ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮದಲ್ಲಷ್ಟೇ ಭಾಗಿಯಾಗಲಿದ್ದಾರೆ.
ಸಮಯದ ಅಭಾವ ಹಿನ್ನೆಲೆ ಬಿಜೆಪಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ರದ್ದು ಮಾಡಿದೆ. ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶ ರದ್ದಾಗಿದೆ ಎಂದು ತಿಳಿದು ಬಂದಿದೆ.ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತ್ರ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಹೌದು. ಆ.10 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಜೆಪಿ ಸಮಾವೇಶ, ರೋಡ್ ಶೋ ನಡೆಸಲು ಆಯೋಜಿಸಿತ್ತು. ಮೆಟ್ರೋ ಕಾರ್ಯಕ್ರಮ ಮುಗಿದ ಬಳಿಕ. ಜಯನಗರದಲ್ಲಿರುವ ಶಾಲಿನ ಆಟದ ಮೈದಾನದಲ್ಲಿ ಸಮಾವೇಶ ನಿಗದಿಯಾಗಿತ್ತು. ಆದರೆ ಸಮಯದ ಅಭಾವ ಹಿನ್ನೆಲೆ ಬಿಜೆಪಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ರದ್ದು ಮಾಡಿದೆ
ಆಗಸ್ಟ್.10 ರಂದು ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ. ಬಸವನಗುಡಿಯ ರಾಷ್ಟ್ರೀಯ ವಿದ್ಯಾಲಯ ರಸ್ತೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಪ್ರಮುಖ ಕೇಂದ್ರಗಳ ಮೂಲಕ ಬೊಮ್ಮಸಂದ್ರದವರೆಗೆ ಸಂಪರ್ಕ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಲಿದ್ದು, 19.15 ಕಿಲೋಮೀಟರ್ ದೂರ ಹೊಂದಿದೆ.