ಬೆಂಗಳೂರು: ಕಿದ್ವಾಯಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿಯನ್ನು ಬಂಧಿಸಲಾಗಿದೆ. ವಿಜಯಪುರದಲ್ಲಿ ಕೈದಿಯನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.
ಕೈದಿ ಚೇತನ್ ಕಲ್ಯಾಣ್ ನನ್ನು ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚೇತನ್ ಕಲ್ಯಾಣ್ ಇತ್ತೀಚೆಗೆ ವಿಜಯಪುರದಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದ ಚೇತನ್ ನನ್ನು ಸೆಪ್ಟೆಂಬರ್ 8ರಂದು ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಆಸ್ಪತ್ರೆಯಿಂದ ಚೇತನ್ ಪರಾರಿಯಾಗಿದ್ದ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.