ಬೆಂಗಳೂರು: ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ. ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಸಹಾಯ ಪ್ರಾಧ್ಯಾಪಕ ಅಬ್ದುಲ್ ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಟಿ. ಬೇಗೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಮೈಕ್ರೋ ಬಯಾಲಜಿ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ಕ್ಲಾಸ್ ರೂಂನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ. ಟಿ. ಬೇಗೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಘಟನೆ ನಡೆದಿತ್ತು. ಅಬ್ದುಲ್ ಗೆ ವಿದ್ಯಾರ್ಥಿಗಳು ಹಿಗ್ಗಾಮುಗ್ಗಾ ಥಳಿಸಿದ್ದರು.
ಅಬ್ದುಲ್ ಲವ್ ಪ್ರಪೋಸ್ ಮಾಡಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಇತರೆ ವಿದ್ಯಾರ್ಥಿಗಳು ಕೂಡ ಅಬ್ದುಲ್ ನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕೊನೆಗೆ ವಿದ್ಯಾರ್ಥಿಗಳ ಕೈಯಿಂದ ತಪ್ಪಿಸಿಕೊಂಡ ಅಬ್ದುಲ್ ಸ್ಥಳದಿಂದ ಪರಾರಿಯಾಗಿದ್ದು, ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

