HomeLatest NewsBREAKING: ಬೆಟ್ಟಿಂಗ್ ಕೇಸ್ ನಲ್ಲಿ ಖ್ಯಾತ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್ ಆಸ್ತಿ ಜಪ್ತಿ

BREAKING: ಬೆಟ್ಟಿಂಗ್ ಕೇಸ್ ನಲ್ಲಿ ಖ್ಯಾತ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್ ಆಸ್ತಿ ಜಪ್ತಿ

ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಪರ ಪ್ರಚಾರ ನಡೆಸಿದ ಆರೋಪದಡಿ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನವ್ ಅವರಿಗೆ ಸೇರಿದ ಒಟ್ಟು 11.14 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಜಪ್ತಿ ಮಾಡಿದೆ.

1 ಎಕ್ಸ್ ಬೆಟ್ ಎಂಬ ಆನ್ಲೈನ್ ಬೆಟ್ಟಿಂಗ್ ಕಂಪನಿಯ ಕುರಿತು ಖಚಿತ ಮಾಹಿತಿ ಹೊಂದಿದ್ದರೂ ಈ ಇಬ್ಬರು ಈ ಕಂಪನಿಯ ನಂಟು ಹೊಂದಿರುವ ವಿದೇಶಿ ಸಂಸ್ಥೆಗಳ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅಕ್ರಮ ಹಣದ ಮೂಲವನ್ನು ಮುಚ್ಚಿಡಲು ಈ ಕ್ರಿಕೆಟಿಗರಿಗೆ ವಿದೇಶಿ ಸಂಸ್ಥೆ ಹೆಸರಲ್ಲಿ ಹಣ ಪಾವತಿಸಲಾಗಿತ್ತು ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

ಹೀಗಾಗಿ ಸ್ವೀಕರಿಸಿದ ಹಣ ಅಪರಾಧವೆಂದು ಪರಿಗಣಿಸಿದ ಜಾರಿ ನಿರ್ದೇಶನಾಲಯ ಶಿಖರ್ ಧವನ್ ಅವರ 4.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ, ಸುರೇಶ್ ರೈನಾ ಅವರ 6.64 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಬೆಟ್ಟಿಂಗ್ ಕಂಪನಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ವಂಚನೆ ಎಸಗಿದೆ ಎನ್ನುವ ಆರೋಪದಡಿ ಈಗಾಗಲೇ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಸೇರಿದಂತೆ ಹಲವರ ವಿಚಾರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular