ವಿಜಯಪುರ : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಏನಿದು ಆರೋಪ..?
ಏ.7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದಿದ್ದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶಾಂತಿ ಸೌಹಾರ್ದತೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಮೊಹಮದ್ ಹನ್ನಾನ್ ಎಂಬುವವರು ವಿಜಯಪುರದ ಗೋಲ್ ಗುಂಬಜ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.