BREAKING : ಪ್ರಚೋದನಕಾರಿ ಹೇಳಿಕೆ : ಶರಣ್ ಪಂಪ್’ವೆಲ್, ಪುನೀತ್ ಅತ್ತಾವರ ವಿರುದ್ಧ ‘FIR’ ದಾಖಲು.!

ಮಂಗಳೂರು : ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ನೀಡಿದ ಪುನಿತ್ ಅತ್ತಾವರ್ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗಮಂಗಲ ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣಕ್ಕೆ ಶರಣ್ ಪಂಪ್ವೆಲ್ ಆಕ್ರೋಶ ಹೊರಹಾಕಿದ್ದರು. ಈದ್ ಮಿಲಾದ್ ಮೆರವಣಿಗೆ ಹೇಗೆ ಮಾಡ್ತೀರಿ ನೋಡೋಣ ಎಂದು ಸವಾಲು ಹಾಕಿದ್ದರು. ಇದಕ್ಕೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಓಪನ್ ಚಾಲೆಂಜ್ ಹಾಕಿದ್ದು, ಧಮ್ ಇದ್ದರೆ ಮಿಲಾದ್ ಮೆರವಣಿಗೆ ತಡಿ ಎಂದು ಸವಾಲ್ ಹಾಕಿದ್ದರು. ಪ್ರಚೋಧನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎಚ್ಚರಿಕೆ ನೀಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read