ಧಾರವಾಡ: ಪಿಎಸ್ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರ ಮೇಲೆ ಫೈರಿಂಗ್ ಮಾಡಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಿರಿನಗರ ಬಡಾವಣೆಯ ಮನೆಯೊಂದರಲ್ಲಿ ಕಳ್ಳತನ ನಡೆಸಲಾಗಿದ್ದು, ನಂತರ ಪರಾರಿಯಾಗುವ ವೇಳೆ ಪೊಲೀಸರ ಕೈಗೆ ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಮುಜಾಮಿಲ್ ಮತ್ತು ವಿಜಯ್ ಎಂಬುವವರನ್ನು ಪೊಲೀಸರು ಸೆರೆಹಿಡಿದಿದ್ದು, ಈ ವೇಳೆ ಪಿಎಸ್ಐ ಮೇಲೆ ಹಲ್ಲೆ ನಡೆಸಿ ಕಳ್ಳರು ಪರಾರಿಯಾಗಲು ಮುಂದಾಗಿದ್ದಾರೆ. ಪಿಎಸ್ಐ ಮಲ್ಲಿಕಾರ್ಜುನ ಇಬ್ಬರ ಮೇಲೆ ಫೈರಿಂಗ್ ಮಾಡಿದ್ದು, ಮುಜಾಮಿಲ್ ಮತ್ತು ವಿಜಯ್ ಕಾಲಿಗೆ ಗುಂಡೇಟು ಬಿದ್ದಿದೆ. ಇಬ್ಬರನ್ನೂ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.