BREAKING : ಸಾರ್ವಜನಿಕರೇ ಗಮನಿಸಿ : ನ. 27 ರಂದು ‘ಮುಖ್ಯಮಂತ್ರಿ ಜನತಾ ದರ್ಶನ’

ಬೆಂಗಳೂರು : ನವೆಂಬರ್ 27 ರಂದು ಬೆಂಗಳೂರಿನಲ್ಲಿ ‘ಮುಖ್ಯಮಂತ್ರಿ ಜನತಾ ದರ್ಶನ’ ನಿಗದಿಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27 ರ ಬೆಳಗ್ಗೆ 9 :30 ರಿಂದ ಸಿಎಂ ಸಿದ್ದರಾಮಯ್ಯರಿಂದ ‘ಮುಖ್ಯಮಂತ್ರಿ ಜನತಾ ದರ್ಶನ’ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಹಾಗೂ ಸ್ಥಳದಲ್ಲೇ ಪರಿಹಾರ ಕಲ್ಪಿಸಿ ಕೊಡಲು ಸೂಚಿಸಲಿದ್ದಾರೆ.

ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ತಿಂಗಳು ಜನತಾ ದರ್ಶನ ಏರ್ಪಡಿಸುವಂತೆ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ಜನಸಾಮಾನ್ಯರ ಸಮಸ್ಯೆ, ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ದೊರಕಿಸಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿಗಳ ನಿರ್ದೇಶನದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಕಳೆದ ತಿಂಗಳಿಂದ ಜಿಲ್ಲಾಮಟ್ಟದಲ್ಲಿ ಜನತಾದರ್ಶನ ಆರಂಭಿಸಿದ್ದಾರೆ. ಮುಂದಿನ ಹಂತದಲ್ಲಿ ತಾಲೂಕು ಮಟ್ಟದಲ್ಲಿಯೂ ಜನತಾದರ್ಶನ ನಡೆಸಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಜನತಾದರ್ಶನದಲ್ಲಿ ಜನಸಾಮಾನ್ಯರ ಸಮಸ್ಯೆ, ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸಿಕೊಡಲಾಗುತ್ತದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read