HomeKarnatakaBREAKING : ಜಾತಿ ನಿಂದನೆ ಆರೋಪ : ಬೆಂಗಳೂರಿನಲ್ಲಿ `ಪುನೀತ್‌ ಕೆರೆಹಳ್ಳಿ’ ಅರೆಸ್ಟ್

BREAKING : ಜಾತಿ ನಿಂದನೆ ಆರೋಪ : ಬೆಂಗಳೂರಿನಲ್ಲಿ `ಪುನೀತ್‌ ಕೆರೆಹಳ್ಳಿ’ ಅರೆಸ್ಟ್

ಬೆಂಗಳೂರು: ಜಾತಿ ನಿಂದನೆ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಜಾತಿನಿಂದನೇ, ಅವಾಚ್ಯ ಶಬ್ದಗಳನ್ನು ಬಳಸಿರುವ ಆರೋಪದ ಅಡಿಯಲ್ಲಿ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುನೀತ್‌ ಕೆರೆಹಳ್ಳಿ ಫೇಸ್‌ಬುಕ್‌ನಲ್ಲಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಣಧೀರ ಪಡೆಯ ಮುಖಂಡ ಬೈರಪ್ಪ ಹರೀಶ್‌ಕುಮಾರ್‌ ದೂರು ನೀಡಿದ್ದರು. ಈ ದೂರು ಆಧರಿಸಿ ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular