HomeKarnatakaBIG NEWS : ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ‘ಸಿನಿಮಾ ಟಿಕೆಟ್’ ಖರೀದಿ ಕಡ್ಡಾಯವಲ್ಲ; ಸರ್ಕಾರದಿಂದ ಸ್ಪಷ್ಟನೆ

BIG NEWS : ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ‘ಸಿನಿಮಾ ಟಿಕೆಟ್’ ಖರೀದಿ ಕಡ್ಡಾಯವಲ್ಲ; ಸರ್ಕಾರದಿಂದ ಸ್ಪಷ್ಟನೆ

ಬೆಂಗಳೂರು: ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರದ ವೀಕ್ಷಣೆಗೆ ರೇಷನ್ ಅಂಗಡಿಗಳಲ್ಲಿ ಸಿನಿಮಾ ಟಿಕೆಟ್ ಕಡ್ಡಾಯಗೊಳಿಸಲಾಗುತ್ತಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮಹತ್ವದ ಸ್ಪಷ್ಟನೆ ನೀಡಿದೆ. ಯಾವುದೇ ವ್ಯಕ್ತಿ, ಸಂಘ ಅಥವಾ ನ್ಯಾಯಬೆಲೆ ಅಂಗಡಿ ಮಾಲೀಕರು ಸಿನಿಮಾ ಟಿಕೆಟ್ ಖರೀದಿಸುವಂತೆ ಒತ್ತಾಯಿಸುವಂತಿಲ್ಲ. ಪಡಿತರದಾರರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ಸ್ವಇಚ್ಛೆಯಿಂದ ಮಾತ್ರ ಸಿನಿಮಾ ವೀಕ್ಷಿಸಬಹುದು ಎಂದು ಆಯುಕ್ತರು ಆದೇಶ ಹೊರಡಿಸಿದ್ದಾರೆ.

“ಸರ್ಕಾರಿ ನ್ಯಾಯಬೆಲೆ ಅಂಗಡಿ” ಎಂಬ ಚಲನಚಿತ್ರದ ಮೂಲಕ ಮುಖ್ಯಮಂತ್ರಿ ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ, ಪಡಿತರ ವಿತರಣೆ ವ್ಯವಸ್ಥೆ, ಸರ್ಕಾರದ ಆದೇಶಗಳು ಹಾಗೂ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸಿನಿಮಾ ನಿರ್ಮಿಸಲಾಗಿದೆ. ಈ ಸಂಬಂಧ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಡುದಾರರಿಗೆ ಚಿತ್ರದ ಬಗ್ಗೆ ಮಾಹಿತಿ ನೀಡುವಂತೆ ಈ ಹಿಂದೆ ಇಲಾಖೆ ಸೂಚನೆ ನೀಡಿತ್ತು. ಆದರೆ ಇತ್ತೀಚೆಗೆ ಹಾವೇರಿಯ ಕರುನಾಡು ದಿನಪತ್ರಿಕೆ ಹಾಗೂ ಬೆಂಗಳೂರಿನ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ “ರೇಷನ್ ಜೊತೆಗೆ ಸಿನಿಮಾ ಟಿಕೆಟ್” ಎಂಬ ಶೀರ್ಷಿಕೆಯಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ₹50 ರಿಂದ ₹150ರವರೆಗೆ ಸಿನಿಮಾ ಟಿಕೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ವರದಿ ಪ್ರಕಟವಾಗಿತ್ತು.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಆಯುಕ್ತರು ರಾಜ್ಯದ ಎಲ್ಲಾ ಜಂಟಿ ಹಾಗೂ ಉಪ ನಿರ್ದೇಶಕರಿಗೆ ಪತ್ರ ಬರೆದು, ಯಾವುದೇ ರೀತಿಯ ಬಲವಂತ ಅಥವಾ ಒತ್ತಾಯಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ, ಸಿನಿಮಾ ವೀಕ್ಷಣೆ ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದ್ದು, ಟಿಕೆಟ್ ಖರೀದಿಸದ ಕಾರಣಕ್ಕೆ ಯಾವುದೇ ಪಡಿತರ ಸೇವೆ ಅಥವಾ ಸೌಲಭ್ಯಕ್ಕೆ ತೊಂದರೆ ಉಂಟುಮಾಡಬಾರದು ಎಂಬ ಸಂದೇಶವನ್ನು ಇಲಾಖೆಯು ಪರೋಕ್ಷವಾಗಿ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular