HomeIndiaBREAKING: ಪ್ರಧಾನಿ ನಿವಾಸದ ಬಳಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

BREAKING: ಪ್ರಧಾನಿ ನಿವಾಸದ ಬಳಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಪ್ರಿಯಾಂಕಾ ಗಾಂಧಿ ಪೊಲೀಸ್ ವಶಕ್ಕೆ

ನವದೆಹಲಿ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಲೋಕ ಕಲ್ಯಾಣ್ ಮಾರ್ಗ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಕೇರಳ ಸಿಎಂ ವಿ.ಡಿ. ಸತೀಶನ್, ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ಎನ್‌ಸಿಪಿ-ಎಸ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಕೂಡ ಪಾಲ್ಗೊಂಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡಿಸಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಪ್ರಧಾನಿ ಮೋದಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಸ್ಥಳಕ್ಕೆ ಬಂದಿದ್ದಾರೆ. ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರನ್ನು ಪೋಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದುಕೊಂಡು ಹೋಗಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

ಇದು ಅಂತ್ಯವಲ್ಲ; ರಾಹುಲ್ ಗಾಂಧಿ ನೇತೃತ್ವದಲ್ಲಿ ಹೊಸ ಕ್ರಾಂತಿಯ ಆರಂಭವಾಗಿದೆ. ಅವರು ನಮ್ಮನ್ನು ಬಂಧಿಸಬಹುದು, ಲಾಠಿ ಚಾರ್ಜ್ ಮಾಡಬಹುದು ಅಥವಾ ನಮ್ಮ ಮೇಲೆ ಕೆಟ್ಟದಾಗಿ ವರ್ತಿಸಬಹುದು, ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ತಮ್ಮ ಭವಿಷ್ಯವನ್ನು ಕಳೆದುಕೊಂಡಿರುವ ಮತ್ತು ತಮ್ಮ ಕುಟುಂಬಗಳ ಭರವಸೆಗಳನ್ನು ಕಳೆದುಕೊಂಡಿರುವ ಭಾರತದ ಲಕ್ಷಾಂತರ ಪುತ್ರರು ಮತ್ತು ಪುತ್ರಿಯರಿಗೆ ಮೋದಿ ಜಿ ಉತ್ತರಿಸಬೇಕಾಗುತ್ತದೆ. ಈ ಕ್ರಾಂತಿ ಈಗ ಉರಿಯಲಿದೆ; ರಾಹುಲ್ ಗಾಂಧಿ ನೇತೃತ್ವದಲ್ಲಿ ಮುಂದುವರೆಯಲಿದೆ ಇದನ್ನು ನಿಲ್ಲಿಸಲಾಗುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular