BREAKING : ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಹಾಜರಾದ ‘ರಾಹುಲ್ ಗಾಂಧಿ’..!

ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಿದ್ದಾರೆ.

ಕಳೆದ ವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋರ್ಟ್ ಗೆ ಹಾಜರಾಗಿದ್ದರು. ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಆದರೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ, ಈ ಹಿನ್ನೆಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ರಾಹುಲ್ ಗಾಂಧಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಜೂನ್ 7 ರಂದು ತಪ್ಪದೇ ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಮೇರೆಗೆ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಿದ್ದಾರೆ. ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಸಚಿವರುಗಳು ಸಾಥ್ ನೀಡಿದ್ದಾರೆ.

ಚುನಾವಣೆ ವೇಳೆ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ, ಭ್ರಷ್ಟಾಚಾರದ ದರಪಟ್ಟಿಯ ಜಾಹೀರಾತನ್ನು ಕಾಂಗ್ರೆಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಮಾನನಷ್ಟ ಮೊಕದ್ದಮೆ ಸಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

ರಾಹುಲ್ ಗಾಂಧಿ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಕುಶಲೋಪರಿ ವಿಚಾರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1798927097228062851

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read