ಕಲಬುರಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಮಲಗಿದ್ದ ವೇಳೆ ಮನೆ ಗೋಡೆ ಕುಸಿದು ಸಾನಿಯಾ ಸೈಫಾನ್ ಸಾಬ್ ಸಾವನ್ನಪ್ಪಿದ್ದಾರೆ. ಗಾಯಗೊಂಡ ನಾಲ್ವರು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಾತ್ರಿ ನಿರಂತರ ಮಳೆಯಿಂದಾಗಿ ತೇವಗೊಂಡು ಶಿಥಿಲವಾಗಿದ್ದ ಮನೆ ಗೋಡೆ ಕುಸಿದು ದುರಂತ ಸಂಭವಿಸಿದೆ ಎನ್ನಲಾಗಿದೆ.