HomeLatest NewsBREAKING: ಬೆಂಗಳೂರಿನಲ್ಲಿ ರಾತ್ರಿಯಿಂದ ಮುಂದುವರೆದ ಮಳೆ: ಸವಾರರು, ವ್ಯಾಪಾರಿಗಳು ಹೈರಾಣ

BREAKING: ಬೆಂಗಳೂರಿನಲ್ಲಿ ರಾತ್ರಿಯಿಂದ ಮುಂದುವರೆದ ಮಳೆ: ಸವಾರರು, ವ್ಯಾಪಾರಿಗಳು ಹೈರಾಣ

ಬೆಂಗಳೂರು: ಬೆಂಗಳೂರಿನ ಹಲವು ಕಡೆಗಳಲ್ಲಿ ಮತ್ತೆ ರಾತ್ರಿಯಿಂದ ಜಿಟಿ ಜಿಟಿ ಮಳೆಯಾಗಿದೆ. ಇದರಿಂದಾಗಿ ಮಾರುಕಟ್ಟೆಗೆ ಬಂದಿದ್ದ ಗ್ರಾಹಕರು, ವ್ಯಾಪಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗಿದೆ.

ಮೆಜೆಸ್ಟಿಕ್, ಕೆಜಿ ರಸ್ತೆ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ವೃತ್ತ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ತ್ಯಾಗರಾಜನಗರ, ಹನುಮಂತನಗರ, ಶ್ರೀನಗರ, ವಿಜಯನಗರ, ಮೈಸೂರು ರಸ್ತೆ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ ಮತ್ತು ಕೆಆರ್ ಪುರಂ ಸೇರಿದಂತೆ ಸುತ್ತಮುತ್ತ ಮಳೆ ಮುಂದುವರೆದಿದೆ. ಹಲವೆಡೆ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರಿಗೆ ತೊಂದರೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular