HomeLatest NewsBREAKING: ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ಇಂದು ಶಾಲೆಗಳಿಗೆ...

BREAKING: ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ಇಂದು ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಚಿಕ್ಕಮಗಳೂರು ಸೇರಿ ಹಲವೆಡೆ ಆಗಸ್ಟ್ 30ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಂಗನವಾಡಿ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ರಜೆ ಘೋಷಣೆ ಮಾಡಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಿಂದ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ ಹೋಬಳಿಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಹೊನ್ನಾವರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಭಾರಿ ಮಳೆ ಮುನ್ಸೂಚನೆ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಹೊನ್ನಾವರ ತಹಶೀಲ್ದಾರ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular