ಬೆಂಗಳೂರು: ರಾಜ್ಯದ ಹಲವು ಕಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಹಲವು ಕಡೆ ಶಾಲೆಗಳಿಗೆ ರಜೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆ
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಸಾಗರ ತಹಶೀಲ್ದಾರ್ ಪ್ರತಿಭಾ ಶಾಲೆ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆ
ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆ
ಬೆಳಗಾವಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ನಿಪ್ಪಾಣಿ, ಖಾನಾಪುರ ಮತ್ತು ಬೆಳಗಾವಿ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

