BREAKING : ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ‘ರಾಜಾತಿಥ್ಯ’ ಪ್ರಕರಣ : ಇಬ್ಬರು ಜೈಲರ್ ಗಳು ಅಮಾನತು..!

ಕಲಬುರಗಿ : ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ.

ಕರ್ತವ್ಯಲೋಪದಡಿ ಸೈನಾಜ್ ನಿಗೆವಾನ್, ಪಾಂಡುರಂಗ ಹರವಾಳ ಎಂಬುವವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಜೈಲಿನಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಫೋಟೋ,ವಿಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪಾ ಢಘೆ ಅವರು ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದರು.ಸ್ಮಾರ್ಟ್ ಫೋನ್ ಬಳಸಿ ಸ್ನೇಹಿತರಿಗೆ ಕೈದಿಗಳ ವಿಡಿಯೋ ಕಾಲ್, ಗಾಂಜಾ ಸೇದುತ್ತಾ ಜೈಲಿನಲ್ಲಿ ಸೆಲ್ಫಿಗೆ ಪೋಸ್ ನೀಡುತ್ತಿರುವ ಕೈದಿಗಳ ವಿಡಿಯೋ ಭಾರಿ ವೈರಲ್ ಆಗಿತ್ತು. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read