BREAKING : ‘ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣ : ಬಳ್ಳಾರಿಯಲ್ಲಿ ಓರ್ವ ‘NIA’ ವಶಕ್ಕೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಓರ್ವನನ್ನು ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳ್ಳಾರಿ ಮೂಲದ ಶಬ್ಬೀರ್ ನನ್ನು ವಶಕ್ಕೆ ಪಡೆದ ಎನ್ ಐ ಎ ಅಧಿಕಾರಿಗಳು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಶಂಕಿತ ಆಂಧ್ರಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read