ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಅತ್ಯಾಚಾರ ಆರೋಪದಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
2018ರಿಂದ 2023ರವರೆಗೆ ಬೆದರಿಸಿ ಅತ್ಯಾಚಾರ ಎಸಗಿದ್ದಾಗಿ ಆರೋಪಿಸಲಾಗಿದೆ. ಶಿಕ್ಷಕಿ ಮನೆಗೆ ಹೋಗಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. 2020ರಲ್ಲಿ ಸಂದೇಶ್ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದರು. ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರ ಆರೋಪದಡಿ ದೂರು ನೀಡಲಾಗಿದೆ. ಇನ್ಸ್ ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

