BREAKING : ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ : ರ‍್ಯಾಪಿಡೋ ಬೈಕ್ ಚಾಲಕ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಹಾವೇರಿ ಮೂಲದ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೈಕ್‌ನಲ್ಲಿ ಹೋಗುವಾಗ ಚಾಲಕ ಅನುಚಿತವಾಗಿ ವರ್ತಿಸಿ, ಮಾರ್ಗ ಮಧ್ಯೆ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾವೇರಿಯ ಗುರುವೆಂಕಟಪ್ಪ ಎಂದು ಗುರುತಿಸಲಾಗಿದೆ. ಸಂಪಗಿ ರಾಮನಗರದಲ್ಲಿ ಸ್ನೇಹಿತನೊಂದಿಗೆ ವಾಸವಿದ್ದ ಗುರುವೆಂಕಟಪ್ಪ, ಬೈಕ್ ನಲ್ಲಿ ರ್ಯಾಪಿಡೋ ಮುಖಾಂತರ ಯುವತಿಗೆ ಡ್ರಾಪ್ ಮಾಡುವಾಗ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ಆರೋಪಿಸಿದ್ದಳು.

ಅಥಿರಾ ಪುರುಷೋತ್ತಮನ್‌ ಲೈಂಗಿಕ ಕಿರುಕುಳಕ್ಕೊಳಗಾದ ಯುವತಿ. ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಖಂಡಿಸಿ ನಗರದ ಟೌನ್ ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಯುವತಿ ಅಥಿರಾ ಪುರುಷೋತ್ತಮನ್‌, ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮನೆಗೆ ಹೋಗಲು ರ‍್ಯಾಪಿಡೋ ಬೈಕ್ ಬುಕ್‌ ಮಾಡಿದ್ದಳು. ಈ ವೇಳೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪ ಕೇಳಿಬಂದಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read