ಬೀದರ್: ಗ್ರಾಮ ಪಂಚಾಯಿತಿ ಸದಸ್ಯ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೀದರ್ ನ ಎಸ್.ಕೆ. ಡಾಬಾ ಬಳಿ ಮಚ್ಚಿನಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು 49 ವರ್ಷದ ವೈದ್ಯನಾಥ ದತ್ತಾತ್ರೇಯ ಕೆಲಬಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬೀದರ್ ತಾಲೂಕಿನ ಹೊನ್ನಿಕೆರೆ ಗ್ರಾಮದ ನಿವಾಸಿಯಾಗಿರುವ ವೈದ್ಯನಾಥ ದತ್ತಾತ್ರೇಯ ಕೆಲಬಾ ಡಾಬಾದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಏಕಾಏಕಿ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ಮಾಡಿ ಕೊಲೆ ಮಾಡಿದ್ದಾರೆ.
ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಓಡಿದಾಗ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು ಇಬ್ಬರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬೀದರ್ ನ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.