HomeLatest NewsBREAKING: ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವಕನ ಬರ್ಬರ ಹತ್ಯೆ

BREAKING: ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವಕನ ಬರ್ಬರ ಹತ್ಯೆ

ತುಮಕೂರು: ರಿಯಲ್ ಎಸ್ಟೇಟ್ ಉದ್ಯಮಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಮತ್ತು ಶಫಿವುಲ್ಲಾ ಅವರು 25 ವರ್ಷದ ಮಧುವನ್ ನನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮೂರು ಕೋಟಿ ರೂಪಾಯಿ ಮೌಲ್ಯದ ಎರಡು ಎಕರೆ ಜಮೀನಿಗಾಗಿ ಕೊಲೆ ಮಾಡಲಾಗಿದೆ. ನಿನ್ನೆ ತೋಟದಲ್ಲಿ ಇಬ್ಬರು ಆರೋಪಿಗಳು ಮಧುವನ್ ನನ್ನು ಕೊಲೆ ಮಾಡಿದ್ದಾರೆ.

2015 ರಲ್ಲಿ ಜಮೀನು ಮಾರಾಟಕ್ಕೆ ಮಧುವನ್ ತಂದೆ ನಿರ್ಧರಿಸಿದ್ದರು. ತುಮಕೂರಿನ ಅಮಾನಿಕೆರೆ ಸಮೀಪದ ಜಮೀನು ಮಾರಾಟಕ್ಕೆ ಚಿಂತನೆ ನಡೆಸಿದ್ದರು. ತನ್ನ ತಾಯಿಯಿಂದ ನಾರಾಯಣಸ್ವಾಮಿಗೆ ಜಮೀನು ಬಂದಿತ್ತು. ಅದನ್ನು ಮಹೇಶ್ ಗೆ ಮಾರಾಟ ಮಾಡಲು ಮುಂದಾಗಿದ್ದರು. ಜಮೀನು ದಾಖಲೆ ಸಮಸ್ಯೆ ಸರಿಪಡಿಸಲು ಮೂರು ವರ್ಷಗಳ ಕಾಲ ನಾರಾಯಣಸ್ವಾಮಿ ಸಮಯ ತೆಗೆದುಕೊಂಡಿದ್ದರು. ನಂತರ ಮಗ ಮಧುವನ್ ಎಂಟ್ರಿ ಆಗಿದ್ದರು. ಜಮೀನು ಮಾರಾಟಕ್ಕೆ ನಾರಾಯಣಸ್ವಾಮಿ ಪುತ್ರ ಮಧುವನ್ ನಿರಾಕರಿಸಿದ್ದ. ಕಳೆದ 7 ವರ್ಷಗಳಿಂದ ಜಮೀನು ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ಮಧುವನ್ ಮಾತನಾಡಿಸಲು ಮಹೇಶ್ ತೋಟಕ್ಕೆ ಬಂದಿದ್ದ. ಮಾತಿಗೆ ಮಾತು ಬೆಳೆದು ಅಲ್ಲೇ ಇದ್ದ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮ ಮಹೇಶ್ ಮತ್ತು ಶಫಿವುಲ್ಲಾ ಅವರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular