ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಮೇ 29 ಮತ್ತು 30ರಂದು ಗುರುವಾರ ಮತ್ತು ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ನಾಳೆ ಮತ್ತು ನಾಡಿದ್ದು ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.