BIG NEWS : ‘SSLC’ ಪರೀಕ್ಷೆ-1ಕ್ಕೆ ನೋಂದಣಿ ದಿನಾಂಕ ವಿಸ್ತರಣೆ, ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ.!

ಬೆಂಗಳೂರು : 2025ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ / ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸರಣೆ ಮಾಡಲಾಗಿದೆ.

2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಅವದಿಯನ್ನು ದಿನಾಂಕ:20.11.2024ರವರೆಗೆ ವಿಸ್ತರಿಸಲಾಗಿತ್ತು.

ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನ: ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ. ಪುನ: ದಿನಾಂಕ ವಿಸ್ತರಣೆಯನ್ನು ಮಾಡಲಾಗುವುದಿಲ್ಲ. ಈ ಸಂಬಂಧ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪರ ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.
ಮಂಡಳಿ ಜಾಲತಾಣದ ಶಾಲಾಲಾಗಿನ್ ಮೂಲಕ CCERF, CCEPF, CCERR 2 CCEPR 2 ಮಾಹಿತಿಯನ್ನು ಅಪ್ಲೋಡ್ ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕ: 30-11-2024.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read