HomeKarnatakaBREAKING : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಅವಧಿ ಮಾ.31 ರವರೆಗೆ...

BREAKING : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಅವಧಿ ಮಾ.31 ರವರೆಗೆ ವಿಸ್ತರಣೆ : ಸಚಿವ ಶಿವಾನಂದ್ ಪಾಟೀಲ್

ಬೆಂಗಳೂರು : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಅವಧಿ ಮಾ.31 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸಚಿವ ಶಿವಾನಂದ್ ಪಾಟೀಲ್ ಹೇಳಿದ್ದಾರೆ.

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹ   ಧನ ರೂ.450/- ಪ್ರತಿ ಕ್ವಿಂಟಾಲ್ ಗೆ, ಸೇರಿ ಒಟ್ಟು ರೂ.8,000/- ನಿಗದಿ ಮಾಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದ್ದು, ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್ಪಿಒ, ಟಿಎಪಿಸಿಎಂಎಸ್ ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನದ ಸುದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular