ಬೆಂಗಳೂರು: ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್ ಅವರಿಗೆ ರಿಲೀಫ್ ಸಿಕ್ಕಿದೆ. ಐಟಿ ಇಲಾಖೆ ನೀಡಿದ್ದ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನಟ ಯಶ್ ಅವರ ಆದಾಯ ತೆರಿಗೆಗೆ ಸಂಬಂಧಿಸಿದಂತೆ 2013-14 ರಿಂದ 2018 -19ರ ಅವಧಿಗೆ ನೀಡಿದ್ದ ನೋಟಿಸ್ ರದ್ದು ಮಾಡಲಾಗಿದೆ. ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ನ್ಯಾಯಪೀಠದಿಂದ ಆದೇಶ ನೀಡಲಾಗಿದೆ.
ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿದ್ದ ನಟ ಯಶ್, ಆದಾಯ ತೆರಿಗೆ ಇಲಾಖೆಯವರು ಕರೆದಾಗ ಇಲ್ಲ ಎನ್ನಲು ಆಗುವುದಿಲ್ಲ ಎಂದು ಹೇಳಿದ್ದು ಗಮನಸೆಳೆದಿತ್ತು.
2019ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಯಶ್ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ದಾಖಲೆ ವಶಕ್ಕೆ ಪಡೆದಿದ್ದು, ಹೈಕೋರ್ಟ್ ನಲ್ಲಿ ಆದಾಯ ತೆರಿಗೆ ನೋಟಿಸ್ ಬಗ್ಗೆ ಯಶ್ ಅರ್ಜಿ ಸಲ್ಲಿಸಿದ್ದರು.
