HomeKarnatakaBREAKING : MLC ಸಿ.ಟಿ ರವಿಗೆ ಬಿಗ್ ರಿಲೀಫ್ : 'ಅಶ್ಲೀಲ ಪದ ಬಳಕೆ' ಕೇಸ್’ಗೆ...

BREAKING : MLC ಸಿ.ಟಿ ರವಿಗೆ ಬಿಗ್ ರಿಲೀಫ್ : ‘ಅಶ್ಲೀಲ ಪದ ಬಳಕೆ’ ಕೇಸ್’ಗೆ ಹೈಕೋರ್ಟ್ ಮಧ್ಯಂತರ ತಡೆ.!

ಬೆಂಗಳೂರು : ಅಶ್ಲೀಲ ಪದ ಬಳಕೆ ಆರೋಪದಲ್ಲಿ ಸಿಟಿ ರವಿಗೆ ಹೈಕೋರ್ಟ್ ರಿಲೀಫ್ ನೀಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ಫೆ.20 ರವರೆಗೆ ಮಧ್ಯಂತರ ರಿಲೀಫ್ ಮುಂದುವರೆಸಿರುವ ಹೈಕೋರ್ಟ್ ದೂರುದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನೋಟಿಸ್ ಜಾರಿ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿ ಇತ್ತೀಚೆಗೆ ಸರ್ಕಾರ ಆದೇಶ ಹೊರಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬೆಳಗಾವಿ ಅಧಿವೇಶನದಲ್ಲಿಯೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ವಿಧಾನಸಭೆ ಬಳಿಕ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗಲಾಟೆ ವೇಳೆಯೇ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ ಮಾಡಿದ್ದು, ನನ್ನ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ನನ್ನ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಒಂದಲ್ಲ, ಹತ್ತು ಬಾರಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ್ ದೂರು ನೀಡಿದ್ದರು. ನಂತರ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular