BREAKING : ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದೇ ನಟ ದರ್ಶನ್ : ಆರೋಪಿ ದೀಪಕ್ ಸ್ಪೋಟಕ ಹೇಳಿಕೆ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣ ಕ್ಷಣಕ್ಕೂ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿದೆ.

ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದೇ ನಟ ದರ್ಶನ್ ಎಂದು ಆಪ್ತ ದೀಪಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಕರಣದ 13 ನೇ ಆರೋಪಿಯಾಗಿರುವ ದೀಪಕ್ ವಿಚಾರಣೆ ವೇಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನನ್ನ ಗೆಳತಿಗೆ ಮರ್ಮಾಂಗದ ಫೋಟೋ ಕಳುಹಿಸುತ್ತೀಯಾ ಎಂದು ಬಂದ ನಟ ದರ್ಶನ್ ರೇಣುಕಾ ಸ್ವಾಮಿಯ ಕಾಲು ಅಗಲಿಸಿ ಬೂಟುಗಾಲಿನಿಂದ ಮರ್ಮಾಂಗಕ್ಕೆ ಬಲವಾಗಿ ಹೊಡೆಯುತ್ತಾರೆ. ಇದರಿಂದ ನೋವಿನಿಂದ ನೆಲಕ್ಕೆ ಬಿದ್ದ ರೇಣುಕಾಸ್ವಾಮಿಯನ್ನು ಗ್ಯಾಂಗ್ ಮತ್ತಷ್ಟು ಚಿತ್ರಹಿಂಸೆ ನೀಡುತ್ತದೆ. ಅಲ್ಲದೇ ರೇಣುಕಾಸ್ವಾಮಿ ತಲೆಯನ್ನು ಗೋಡೌನ್ ನಲ್ಲಿ ನಿಲ್ಲಿಸಿದ್ದ ಟೆಂಪೋಗೆ ಡಿಕ್ಕಿ ಹೊಡೆಸಿ ಮತ್ತಷ್ಟು ಚಿತ್ರಹಿಂಸೆ ನೀಡಲಾಗುತ್ತದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಸ್ವತಃ ಪೊಲೀಸರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್ ಹಾಗೂ 13 ನೇ ಆರೋಪಿ ದೀಪಕ್ ನನ್ನು ಬಚಾವ್ ಮಾಡಲು ಬರೋಬ್ಬರಿ 5 ಕೋಟಿ ರೂಪಾಯಿಗೆ ಡೀಲ್ ನಡೆಸಲು ಮುಂದಾಗಿದ್ದರು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read