ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಮೇರೆಗೆ ಇಂದು ಬೆಳಗ್ಗೆ 11 ಗಂಟೆಗೆ ಕೋರ್ಟ್ ಗೆ ನಟ ದರ್ಶನ್ & ಗ್ಯಾಂಗ್ ಹಾಜರಾಗಲಿದ್ದಾರೆ.
ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಗೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಹಾಜರಾಗುವ ಸಾಧ್ಯತೆಯಿದೆ. ಕೋರ್ಟ್ ನಲ್ಲಿ ನಟ ದರ್ಶನ್ , ಪವಿತ್ರಾ ಗೌಡ ಮುಖಾಮುಖಿಯಾಗಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ನಂತರ ಕೋರ್ಟ್ ಎಲ್ಲಾ 17 ಮಂದಿ ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು.