BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದ ಹೈಕೋರ್ಟ್.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ  ದರ್ಶನ್ ಜಾಮೀನು ಆದೇಶ ನಾಳೆಗೆ ಕಾಯ್ದಿರಿಸಿದೆ.

ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಇಂದು ಹೈಕೋರ್ಟ್ ನಲ್ಲಿ ನಡೆದಿದೆ. ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ವಾದ ಮಂಡಿಸಿದರು. ಆರೋಗ್ಯ ಸಮಸ್ಯೆಯನ್ನ ಮುಂದಿಟ್ಟುಕೊಂಡು ವಕೀಲರು ವಾದ ಮಂಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಪ್ರಕರಣದಲ್ಲಿ ಜಾಮೀನು ಉಲ್ಲಂಘಿಸಿ ವಾದ ಮಂಡಿಸಿದರು. ಡಿಕೆ ಶಿವಕುಮಾರ್ ಅವರಿದ್ದ ಆರೋಗ್ಯ ಸಮಸ್ಯೆಗಿಂತ ಇದು ಬಹಳ ಗಂಭೀರವಾಗಿದೆ. ಬೆನ್ನು ಹುರಿಯ ಸಮಸ್ಯೆಯಿಂದ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಆದರೆ ಮುಂದೊಂದು ದಿನ ಬಹಳ ದೊಡ್ಡ ಸಮಸ್ಯೆಗೆ ಕಾರಣ ಆಗುತ್ತದೆ. ಡಿಸ್ಕ್ ನಲ್ಲಿ ಆದ ಸಮಸ್ಯೆಯಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಇದು ನಾರ್ಮಲ್ ಟ್ರೀಟ್ ಮೆಂಟ್ ಆಗಲ್ಲ, ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ ಇದನ್ನು ಪರಿಗಣಿಸಿ ದರ್ಶನ್ ಗೆ ಜಾಮೀನು ನೀಡಬೇಕು ಎಂದು ವಾದ ಮಂಡಿಸಿದರು.

ಆರೋಗ್ಯದ ದೃಷ್ಟಿಯಿಂದ ನಟ ದರ್ಶನ್ ಗೆ ಜಾಮೀನು ನೀಡಬೇಕೆಂದು ವಕೀಲ ಸಿವಿ ನಾಗೇಶ್ ಮನವಿ ಮಾಡಿದ್ದಾರೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಹೈಕೋರ್ಟ್ ಜಡ್ಜ್ ಮುಂದೆ ಸಮಸ್ಯೆ ಆದರೆ ಅದನ್ನು ಸರಿಪಡಿಸಲಾಗುವುದಿಲ್ಲ , ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ . ಚಿಕಿತ್ಸೆ ಪಡೆಯುವುದು ವ್ಯಕ್ತಿಯ ಮೂಲಭೂತ ಹಕ್ಕು ಎಂದರು. ನೀವು ಎಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತೀರಾ ಎಂದು ಜಡ್ಜ್ ಲಾಯರ್ ಗೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ‘ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತೇವೆ ಎಂದು ಹೇಳಿದರು.

ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ದರ್ಶನ್ ಗೆ ಡಿಸ್ಕ್ ಸಮಸ್ಯೆಯಿದೆ. ತಕ್ಷಣ ಸರ್ಜರಿ ಅಗತ್ಯವಿದೆ. ಸರ್ಜರಿ ಮಾಡಿಸದಿದ್ದಲ್ಲಿ ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು. ನಾಳೆ ದರ್ಶನ್ ಗೆ ಮಧ್ಯಂತರ ಜಾಮೀನು ಸಿಗುವ ನಿರೀಕ್ಷೆಯಿದ್ದು, ಯಾವುದಕ್ಕೂ ಕಾದು ನೋಡಬೇಕಾಗಿದೆ.

 

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read