BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಕೋರ್ಟ್’ ಗೆ ಹಾಜರಾದ ನಟ ದರ್ಶನ್ & ಪವಿತ್ರಾಗೌಡ ಗ್ಯಾಂಗ್.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಹಾಜರಾಗಲಿದ್ದು, ಇಬ್ಬರು ಮುಖಾಮುಖಿಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಇದೀಗ ಬಂದ ಮಾಹಿತಿ ಪ್ರಕಾರ ಪವಿತ್ರಾ ಗೌಡ ಹಾಗೂ ನಟ ದರ್ಶನ್ ಕೋರ್ಟ್ ಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ   ಪವಿತ್ರಾ ಗೌಡ ಜೊತೆ ನಿಖಿಲ್, ಕೇಶವಮೂರ್ತಿ, ವಿನಯ್, ಸೇರಿ ಎಲ್ಲಾ ಆರೋಪಿಗಳು ಬಂದಿದ್ದಾರೆ.

ಜಾಮೀನು ನೀಡುವ ವೇಳೆ ಕೋರ್ಟ್ ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು, ಅಂತೆಯೇ ಇಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದಾರೆ.ಇನ್ನೂ, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.ದರ್ಶನ್ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 2024ರ ಜೂನ್ 11ರಂದು ದರ್ಶನ್ ಬಂಧಿಸಲಾಗಿತ್ತು. 2024ರ ಅಕ್ಟೋಬರ್ 30ರಂದು ವೈದ್ಯಕೀಯ ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ನಂತರ 2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್ ಸೇರಿ 7 ಮಂದಿ ಆರೋಪಿಗಳಿಗೆ ನಿಯಮಿತ ಜಾಮೀನು ಮಂಜೂರು ಮಾಡಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read