HomeKarnatakaBREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಮತ್ತೋರ್ವ ಸ್ಯಾಂಡಲ್ ವುಡ್ ನಟ ಅರೆಸ್ಟ್..!

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ಮತ್ತೋರ್ವ ಸ್ಯಾಂಡಲ್ ವುಡ್ ನಟ ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಸ್ಯಾಂಡಲ್ ವುಡ್ ನಟನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪ್ರದೋಷ್ ಎಂದು ಗುರುತಿಸಲಾಗಿದ್ದು, ಈತ ನಟ ದರ್ಶನ್ ಜೊತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈತ ರೇಣುಕಾಸ್ವಾಮಿ ಪ್ರಕರಣದಲ್ಲಿ 14 ನೇ ಆರೋಪಿಯಾಗಿದ್ದಾನೆ.

ನಟ ದರ್ಶನ್ ಜೊತೆ ಪ್ರದೋಷ್ ಬುಲ್ ಬುಲ್, ಬೃಂದಾವನ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ ನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಒಂದೊಂದೇ ಆಘಾತಕಾರಿ ಮಾಹಿತಿಗಳು ಬಹಿರಂಗವಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಬಳಿಕ ಶವ ಎಸೆದು, ಕೊಲೆ ಆರೋಪವನ್ನು ಹೊತ್ತಿಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿ ಕರೆತಂದು ಆರ್.ಆರ್.ನಗರ ಬಳಿಯ ಶೆಡ್ ನಲ್ಲಿ ಕೂಡಿಹಾಕಿ ಮಾರಣಾಂತಿಕವಾಗಿ ಹೊಡೆದು ಹತ್ಯೆಗೈದಿದ್ದು, ಬಳಿಕ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಯ ಶವ ಸಾಗಿಸುವ ಬಗ್ಗೆ ದಾರಿ ಹುಡುಕಿದೆ. ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular