BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ‘ಸ್ಟೋನಿ ಬ್ರೂಕ್’ ಪಬ್ ಬಗ್ಗೆ ಮಾಹಿತಿ ಕೇಳಿದ ಅಬಕಾರಿ ಇಲಾಖೆ

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೋನಿ ಬ್ರೂಕ್ ಪಬ್ ಬಗ್ಗೆ ಅಬಕಾರಿ ಇಲಾಖೆ ಮಾಹಿತಿ ಕೇಳಿದೆ.

ಈ ಸಂಬಂಧ ಪದ್ಮನಾಭನಗರ ಅಬಕಾರಿ ವೃತ್ತ ನಿರೀಕ್ಷಕರು ಪೊಲೀಸರಿಗೆ ಪತ್ರ ಬರೆದಿದ್ದು, ಸ್ಟೋನಿ ಬ್ರೂಕ್ ಪಬ್ ಬಗ್ಗೆ ಮಾಹಿತಿ ಕೇಳಿದ್ದಾರೆ.

ಎ-10 ವಿನಯ್ ಒಡೆತನದ ಸ್ಟೋನಿ ಬ್ರೂಕ್ ಪಬ್ ಸಿಎಲ್ 7 ಪರವಾನಗಿ ಹೊಂದಿದ್ದು, ಪಬ್ ಲೈಸನ್ಸ್ ನವೀಕರಣಕ್ಕೆ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆ ಸ್ಟೋನಿ ಬ್ರೂಕ್ ಪಬ್ ಬಗ್ಗೆ ಅಬಕಾರಿ ಇಲಾಖೆ ಪೊಲೀಸರ ಬಳಿ ಮಾಹಿತಿ ಕೇಳಿದೆ ಎನ್ನಲಾಗಿದೆ. ಇನ್ನೂ ತನಿಖೆ ಹಂತದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯ, ಸ್ಟೋನಿ ಬ್ರೂಕ್ ಪಬ್ ನಲ್ಲಿ ಎಂದಿನಂತೆ ವಹಿವಾಟು ನಡೆಯುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿಗೆ ಸ್ಟೋನಿ ಬ್ರೂಕ್ ಪಬ್ನಲ್ಲಿ ಜೂನ್ 8ರಂದು ಆರೋಪಿಗಳು ಪಾರ್ಟಿ ಮಾಡಿದ್ದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಕೆಲ ಆರೋಪಿಗಳನ್ನು ಸ್ಟೋನಿ ಬ್ರೂಕ್ ಪಬ್ಗೆ ಕರೆದೊಯ್ದ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read