ನವದೆಹಲಿ : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ನೀಡಿರುವ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ ಎಂದು ಹೇಳಲಾಗಿತ್ತು. ಆದರೆ ದರ್ಶನ್ ಪರ ವಕೀಲ ಕಪಿಲ್ ಸಿಬಲ್ ಇಂದು ವಾದ ಮಂಡಿಸಲು ಸಾಧ್ಯವಾ್ದೇ ಇರುವುದರಿಂದ 1 ದಿನ ಕಾಲಾವಕಾಶ ಕೋರಿದ್ದರು. ಆದ್ದರಿಂದ ಕೋರ್ಟ್ ವಿಚಾರಣೆ ಗುರುವಾರಕ್ಕೆ ಮುಂದೂಡಿದೆ. ಕಪಿಲ್ ಸಿಬಲ್ ಬೇರೊಂದು ಕೋರ್ಟ್ ನಲ್ಲಿ ಬ್ಯುಸಿಯಾಗಿರುವುದರಿಂದ ವಾದ ವಿವಾದ ಆಲಿಸಿದ ಕೋರ್ಟ್ ವಿಚಾರಣೆ ಮಂದೂಡಿದೆ. ಗುರುವಾರ ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ಕಳೆದ ಗುರುವಾರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿತ್ತು.
2024ರ ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಆರು ತಿಂಗಳ ಬಳಿಕ 2024 ಡಿಸೆಂಬರ್ 13ರಂದು ಹೈಕೋರ್ಟ್ ಜಾಮೀನು ನೀಡಿತ್ತು. 7 ಮಂದಿಗೆ ಜಾಮೀನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.